- GT vs SRH: ಚೇಸಿಂಗ್ ವೇಳೆ ಹೈದರಾಬಾದ್ ಪಿಚ್ ಸ್ವಲ್ಪ ಭಿನ್ನವಾಗಿ ವರ್ತಿಸಿದರೂ, ಆರಂಭಿಕ ಆಘಾತದಿಂದ ಬೇಗನೆ ಚೇತರಿಸಿಕೊಂಡ ಗುಜರಾತ್ ಟೈಟನ್ಸ್ ಸುಲಭವಾಗಿ ರನ್ ಚೇಸ್ ಪೂರ್ಣಗೊಳಿಸಿತು. ಇದರೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿಯೂ ಬಡ್ತಿ ಪಡೆಯಿತು.
- FCG vs BFC: ಸುನಿಲ್ ಛೆಟ್ರಿ ನಿರ್ಣಾಯಕ ಗೋಲ್ ನೆರವಿಂದ ಬೆಂಗಳೂರು ಎಫ್ಸಿ ತಂಡವು ಎಫ್ಸಿ ಗೋವಾವನ್ನು ಒಟ್ಟು 3-2 ಗೋಲುಗಳ ಅಂತರದಿಂದ ಸೋಲಿಸಿ ಇಂಡಿಯನ್ ಸೂಪರ್ ಲೀಗ್ನ ಫೈನಲ್ ಪ್ರವೇಶಿಸಿದೆ.
- ಆರ್ಸಿಬಿ ವಿರುದ್ಧದ ಐಪಿಎಲ್ ಪಂದ್ಯಕ್ಕೂ ಮುನ್ನ ವೇಗಿ ಜಸ್ಪ್ರೀತ್ ಬುಮ್ರಾ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ. ಅದರ ಬೆನ್ನಲ್ಲೇ ಆಡುವ ಬಳಗದ ಆಯ್ಕೆಗೆ ಲಭ್ಯವಿರಲಿದ್ದಾರೆ ಎಂದು ತಂಡದ ಕೋಚ್ ಮಹೇಲಾ ಜಯವರ್ಧನೆ ತಿಳಿಸಿದ್ದಾರೆ.
- ಗಾಯದಿಂದಾಗಿ ಸುದೀರ್ಘ ವಿರಾಮದಲ್ಲಿರುವ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಕೊನೆಗೂ ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಾರೆ. ಆದರೆ ಆರ್ಸಿಬಿ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಅವರು ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಕಡಿಮೆ ಇದೆ.
- ಸಿಎಸ್ಕೆ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವಿನ ಪಂದ್ಯದ ಸಮಯದ ಒಂದು ತುಣುಕು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಂಎಸ್ ಧೋನಿ ಅವರ ಪತ್ನಿ ಸಾಕ್ಷಿ, ತಮ್ಮ ಮಗಳೊಂದಿಗೆ ಮಾತನಾಡುತ್ತಿರುವುದು ಇದರಲ್ಲಿದೆ. ಅವರು ಧೋನಿ ನಿವೃತ್ತಿಯ ಸುಳಿವು ನೀಡಿದ್ದಾರೆ ಎನ್ನಲಾಗುತ್ತಿದೆ.
- ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್, 4 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಚೇಸಿಂಗ್ ನಡೆಸಿದ ಪಂಜಾಬ್ 9 ವಿಕೆಟ್ ಕಳೆದುಕೊಂಡು 155 ರನ್ ಗಳಿಸಿತು. ಈ ಬಾರಿ ತವರಿನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಪಂಜಾಬ್ ಮುಗ್ಗರಿಸಿದೆ.
- SRH vs GT: ಸನ್ರೈಸರ್ಸ್ ಹೈದರಾಬಾದ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಪಂದ್ಯವು ಏ.6ರ ಸಂಜೆ 7:30ಕ್ಕೆ ಆರಂಭವಾಗಲಿದೆ. ಎಸ್ಆರ್ಎಚ್ ತವರು ಮೈದಾನ ಹೈದರಾಬಾದ್ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುತ್ತಿದೆ.
- ಹೈದರಾಬಾದ್ನಲ್ಲಿ ನಡೆಯಲಿರುವ ಸನ್ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟನ್ಸ್ ನಡುವಿನ ಪಂದ್ಯಕ್ಕೆ ಸಂಬಂಧಿಸಿದ 10 ಪ್ರಮುಖ ಅಂಶಗಳು ಇಲ್ಲಿವೆ. ಐಪಿಎಲ್ 2025ರಲ್ಲಿ ಉಭಯ ತಂಡಗಳ ಆರಂಭ ಭಿನ್ನವಾಗಿದ್ದು, ಪಂದ್ಯ ಕುತೂಹಲ ಮೂಡಿಸಿದೆ.
- ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್, 6 ವಿಕೆಟ್ ಕಳೆದುಕೊಂಡು 183 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಸಿಎಸ್ಕೆ, 5 ವಿಕೆಟ್ ಕಳೆದುಕೊಂಡು 158 ರನ್ ಗಳಿಸಿತು. ಇದರೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ 25 ರನ್ಗಳಿಂದ ಗೆದ್ದಿತು.
- 2036ರ ಒಲಿಂಪಿಕ್ಸ್ ಮತ್ತು ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯಕ್ಕೆ ಭಾರತ ಭಾರಿ ಆಸಕ್ತಿ ವಹಿಸಿದೆ. ಅಧಿಕೃತವಾಗಿ ಬಿಡ್ ಕೂಡಾ ಸಲ್ಲಿಸಲಿದೆ. ಇದೀಗ ಒಲಿಂಪಿಕ್ಸ್ಗೆ ಸಿದ್ಧತೆಯಾಗಿ ಭಾರತದೆಲ್ಲೆಡೆ 10 ಒಲಿಂಪಿಕ್ ತರಬೇತಿ ಕೇಂದ್ರ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ.
- ತಿಲಕ್ ವರ್ಮಾ ರಿಟೈರ್ಡ್ ಔಟ್ ಆಗಿ ಮೈದಾನ ತೊರೆದಾಗ, ಮುಂಬೈ ತಂಡಕ್ಕೆ ಏಳು ಎಸೆತಗಳಲ್ಲಿ 24 ರನ್ಗಳು ಬೇಕಾಗಿದ್ದವು. ತಿಲಕ್ ಬದಲಿಗೆ ಮಿಚೆಲ್ ಸ್ಯಾಂಟ್ನರ್ ಅವರನ್ನು ಮುಂಬೈ ಕಣಕ್ಕಿಳಿಸಿದರೂ ತಂಡಕ್ಕೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.
- ಮೂರನೇ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕಿವೀಸ್ 264 ರನ್ ಗಳಿಸಿತು. ಮೈದಾನ ಒದ್ದೆಯಾಗಿದ್ದ ಕಾರಣದಿಂದ ಪಂದ್ಯವನ್ನು 42 ಓವರ್ಗಳಿಗೆ ಸೀಮಿತಗೊಳಿಸಲಾಗಿತ್ತು. ಕಿವೀಸ್ ಬೃಹತ್ ಮೊತ್ತಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಪಾಕಿಸ್ತಾನ ಕೇವಲ 221 ರನ್ ಗಳಿಸಿತು. ಹೀಗಾಗಿ 43 ರನ್ಗಳಿಂದ ಸೋಲು ಒಪ್ಪಿಕೊಂಡಿತು.
- ಐಪಿಎಲ್ 2025: ಮೊದಲು ಬ್ಯಾಟಿಂಗ್ ಮಾಡಿದ ಎಲ್ಎಸ್ಜಿ 8 ವಿಕೆಟ್ ಕಳೆದುಕೊಂಡು 203 ರನ್ ಗಳಿಸಿತು. ಚೇಸಿಂಗ್ ನಡೆಸಿದ ಮುಂಬೈ ಇಂಡಿಯನ್ಸ್, 5 ವಿಕೆಟ್ ಕಳೆದುಕೊಂಡು 191 ರನ್ ಗಳಿಸಿತು. ಇದರೊಂದಿಗೆ ಲಕ್ನೋ ಸೂಪರ್ ಜೈಂಟ್ಸ್ 12 ರನ್ಗಳ ರೋಚಕ ಜಯ ಸಾಧಿಸಿತು.
- ಐಪಿಎಲ್ 2025ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಐದು ವಿಕೆಟ್ ಪಡೆಯುವ ಮೂಲಕ ತಮ್ಮ ಅತ್ಯುತ್ತಮ ಟಿ20 ಅಂಕಿ-ಅಂಶಗಳನ್ನು ದಾಖಲಿಸಿದ್ದಾರೆ. ಇದರೊಂದಿಗೆ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ.
- ರಾಷ್ಟ್ರಮಟ್ಟದ ಟೆನಿಸ್ ಟೂರ್ನಮೆಂಟ್ನಲ್ಲಿ ಕರ್ನಾಟಕದ ಬಾಲಕಿ ಪದ್ಮಪ್ರಿಯಾ ರಮೇಶ್ ಕುಮಾರ್, ಮೊದಲ ಸ್ಥಾನ ಪಡೆದಿದ್ದಾರೆ. ಪಂಜಾಬ್ನ ಲುಧಿಯಾನದ ಜಸ್ಸೋವಾಲ್ನಲ್ಲಿ ನಡೆದ 14 ವರ್ಷದೊಳಗಿನವರ ರಾಷ್ಟ್ರೀಯ ಸರಣಿ ಸಿಂಗಲ್ಸ್ ಪಂದ್ಯಾವಳಿಯನ್ನು ಗೆದ್ದಿದ್ದಾರೆ.
- ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಐಪಿಎಲ್ 2025 ಪಂದ್ಯದಿಂದ ರೋಹಿತ್ ಶರ್ಮಾ ಹೊರಗುಳಿದಿದ್ದಾರೆ ಎಂದು ನಾಯಕ ಹಾರ್ದಿಕ್ ಪಾಂಡ್ಯ ಖಚಿತಪಡಿಸಿದ್ದಾರೆ. ಇದೇ ವೇಳೆ ಜಸ್ಪ್ರೀತ್ ಬುಮ್ರಾ ಯಾವಾಗ ತಂಡಕ್ಕೆ ಮರಳುತ್ತಾರೆ ಎಂಬ ಬಗ್ಗೆಯೂ ಸ್ಪಷ್ಟನೆ ಸಿಕ್ಕಿದೆ.
- ಪಂಜಾಬ್ ಕಿಂಗ್ಸ್ ತಂಡ ಭರ್ಜರಿ ಫಾರ್ಮ್ನಲ್ಲಿದ್ದು ಆಡಿದ ಎರಡೂ ಪಂದ್ಯಗಳನ್ನು ಸುಲಭವಾಗಿ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಕೂಡಾ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡವು ಆಡಿದ ಮೂರು ಪಂದ್ಯಗಳಲ್ಲಿ 1ರಲ್ಲಿ ಗೆದ್ದು, ಅಂಕಪಟ್ಟಿಯಲ್ಲಿ 8ನೇ ಸ್ಥಾನ ಪಡೆದಿದೆ.
- ಏಪ್ರಿಲ್ 5ರ ಶನಿವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂಜಾಬ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯ ಚಂಡೀಗಢದ ಮುಲ್ಲನ್ಪುರ ಕ್ರೀಡಾಂಗಣದಲ್ಲಿ ನಡೆಯಲಿದೆ. ಪಂದ್ಯಕ್ಕೆ ಸಂಬಂಧಿಸಿದ 10 ಅಂಶಗಳು ಇಲ್ಲಿವೆ.
- ಭಾರತದ ಮಾಜಿ ಕ್ರಿಕೆಟಿಗ ಶಿಖರ್ ಧವನ್ ಜೊತೆಗೆ ಇತ್ತೀಚೆಗೆ ಹೊಸ ಹುಡುಗಿಯೊಬ್ಬರು ಕಾಣಿಸಿಕೊಳ್ಳುತ್ತಿದ್ದಾರೆ. ವಿಚ್ಛೇದನ ಪಡೆದಿರುವ ಧವನ್, ಮತ್ತೆ ಮದುವೆಯಾಗುತ್ತಾರೆ ಎಂಬ ಬಗ್ಗೆ ಅಭಿಮಾನಿಗಳ ನಡುವೆ ಚರ್ಚೆಯಾಗುತ್ತಿದೆ. ಅವರೇ ಸೋಫಿ ಶೈನ್. ಧವನ್ ಮತ್ತೆ ಶೈನ್ ಪ್ರೀತಿಸುತ್ತಿದ್ದಾರೆ ಎಂದು ವದಂತಿಯಾಗಿದೆ.
- ಎಸ್ಆರ್ಎಚ್ ತಂಡದ ಪರ ಆಡಿದ ಹೊಸ ಆಟಗಾರ ಕಮಿಂದು ಮೆಂಡಿಸ್, ಟೂರ್ನಮೆಂಟ್ ಇತಿಹಾಸದಲ್ಲಿ ಎರಡೂ ಕೈಗಳಿಂದ ಬೌಲಿಂಗ್ ಮಾಡಿ ವಿಕೆಟ್ ಪಡೆದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಇವರು ಐಪಿಎಲ್ ಆಡುವ ಕುರಿತು ಕೆಲವು ಪ್ರಮುಖ ಅಂಶಗಳಿವೆ.